Pop Corner

ಆ್ಯಕ್ಷನ್‌ ಕಿಕ್‌ ಸ್ಟಾರ್ಟ್‌; ‘ಡಬಲ್ ಇಸ್ಮಾರ್ಟ್’ ಟೀಸರ್ ರಿಲೀಸ್…

‘ಡಬಲ್ ಇಸ್ಮಾರ್ಟ್’ ಟೀಸರಿನಲ್ಲಿ ಡೈನಾಮಿಕ್ ಸ್ಟಾರ್ ರಾಮ್‌ ಹಾಗೂ ಸಂಜಯ್ ದತ್ ಜುಗಲ್‌ಬಂದಿ

ಕ್ರೇಜಿಯಾಗಿದೆ ʼಡಬಲ್ ಇಸ್ಮಾರ್ಟ್ʼ ಟೀಸರ್

ಡ್ಯಾಷಿಂಗ್ ಡೈರೆಕ್ಟರ್ ಪೂರಿ ಜಗನ್ನಾಥ್ ಹಾಗೂ ಉಸ್ತಾದ್ ರಾಮ್ ಪೋತಿನೇನಿ ಕಾಂಬಿನೇಷನ್ ನ ಬಹುನಿರೀಕ್ಷಿತ ಸಿನಿಮಾ ‘ಡಬಲ್ ಇಸ್ಮಾರ್ಟ್’ತೆರೆಗೆ ಬರಲು ಭರದಿಂದ ತಯಾರಾಗುತ್ತಿದೆ. ಈಗಾಗಲೇ ಸದ್ದಿಲ್ಲದೆ ಈ ಸಿನಿಮಾದ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ ಇದೀಗ ‘ಡಬಲ್ ಇಸ್ಮಾರ್ಟ್’ ಸಿನಿಮಾದ ಮೊದಲ ಟೀಸರ್‌ ಅನ್ನು ಬಿಡುಗಡೆ ಮಾಡಿದೆ.

‘ಇಸ್ಮಾರ್ಟ್ ಶಂಕರ್’ ಸಿನಿಮಾದ ಸೀಕ್ವೆಲ್ ಆಗಿರುವ ‘ಡಬಲ್ ಇಸ್ಮಾರ್ಟ್’ ಸಿನಿಮಾದ ಟೀಸರ್  ಅನ್ನು ಮೇ. 15 ರಂದು ನಟ ಡೈನಾಮಿಕ್ ಸ್ಟಾರ್ ರಾಮ್ ಪೋತಿನೇನಿ ಜನ್ಮದಿನದ ವಿಶೇಷವಾಗಿ ಬಿಡುಗಡೆ ಮಾಡಲಾಗಿದೆ.

ಭರ್ಜರಿ ಆಕ್ಷನ್ ಮೂಲಕ ಉಸ್ತಾದ್ ರಾಮ್ ಪೋತಿನೇನಿ ಎಂಟ್ರಿ…

ಇನ್ನು ಬಿಡುಗಡೆಯಾಗಿರುವ ‘ಡಬಲ್ ಇಸ್ಮಾರ್ಟ್’ ಸಿನಿಮಾದ ಟೀಸರ್ ನಲ್ಲಿ ಮಾಸ್ ಮತ್ತು ಆಕ್ಷನ್-ಪ್ಯಾಕ್ಡ್ ಟೀಸರ್ ನಲ್ಲಿ ರಾಮ್ ಸಖತ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಕಾವ್ಯಾ ಥಾಪರ್ ನಾಯಕಿಯಾಗಿ ನಟಿಸಿದ್ದು, ಸಂಜಯ್ ದತ್ ಖಳನಾಯಕನಾಗಿ ಸಿನಿಮಾದಲ್ಲಿ ರಾಮ್‌ ಎದುರು ತೊಡೆ ತಟ್ಟಿದ್ದಾರೆ. 1.26 ಸೆಕೆಂಡ್ ಇರುವ ಟೀಸರ್ ನಲ್ಲಿ ರಾಮ್ ಪೋತಿನೇನಿ ಹಾಗೂ ಸಂಜು ಬಾಬು ಜುಗಲ್‌ಬಂದಿ ನೋಡುಗರಿಗೆ ಸಖತ್‌ ಕಿಕ್ ಕೊಡುತ್ತಿದೆ.

ಡಬಲ್ ಆಕ್ಷನ್, ಡಬಲ್ ಎನರ್ಜಿ ಮತ್ತು ಡಬಲ್ ಫನ್‌ ಕೊಡುವ ‘ಡಬಲ್ ಇಸ್ಮಾರ್ಟ್’ ಟೀಸರ್ ಕ್ಲೈಮ್ಯಾಕ್ಸ್ ಸೀನ್ಸ್ ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ಮೂಡಿ ಬಂದಿದೆ. ಮಣಿ ಶರ್ಮಾ ಸಂಗೀತ ಚಿತ್ರಕ್ಕಿದೆ. ಕ್ರೇಜಿ ಪ್ಯಾನ್ ಇಂಡಿಯನ್ ಪ್ರಾಜೆಕ್ಟ್ ಡಬಲ್ ಇಸ್ಮಾರ್ಟ್ ಸಿನಿಮಾವನ್ನು ಪುರಿ ಕನೆಕ್ಟ್ ಬ್ಯಾನರ್ ನಡಿ ಪೂರಿ ಜಗನ್ನಾಥ್, ಚಾರ್ಮಿ ಕೌರ್ ನಿರ್ಮಾಣದಲ್ಲಿ ಚಿತ್ರ ಅದ್ಧೂರಿಯಾಗಿ ಮೂಡಿಬರುತ್ತಿದೆ

Related Posts

error: Content is protected !!