Street Beat

‘ಚೌಕಿದಾರ್’ಗೆ ಡೈಲಾಗ್ ಕಿಂಗ್ ಸಾಯಿಕುಮಾರ್ ಎಂಟ್ರಿ

ಪೃಥ್ವಿ ಅಂಬಾರ್ ‘ಚೌಕಿದಾರ್’ಗೆ ಡೈಲಾಗ್ ಕಿಂಗ್ ಸಾಯಿಕುಮಾರ್ ಎಂಟ್ರಿ

ಸಾಯಿಕುಮಾರ್‌ ಪ್ರವೇಶವನ್ನು ಖಚಿತಪಡಿಸಿದ ಚಿತ್ರತಂಡ

ಈಗಾಗಲೇ ತನ್ನ ಟೈಟಲ್ ಮೂಲಕ ಒಂದಷ್ಟು ಪ್ರೇಕ್ಷಕರ ಗಮನ ಸೆಳೆದಿರುವ ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್ ನಟಿಸುತ್ತಿರುವ ‘ಚೌಕಿದಾರ್’ ಸಿನಿಮಾ ತಂಡದಿಂದ ಮತ್ತೊಂದು ಹೊಸ ಅಪ್ ಡೇಟ್ ಸಿಕ್ಕಿದೆ. ಇತ್ತೀಚೆಗಷ್ಟೇ ಟೈಟಲ್ ಬಿಡುಗಡೆ ಮಾಡಿದ್ದ ಚಿತ್ರತಂಡವೀಗ ಡೈಲಾಗ್ ಕಿಂಗ್ ಸಾಯಿಕುಮಾರ್ ಅವರನ್ನು ತಮ್ಮ ಬಳಗಕ್ಕೆ ಸ್ವಾಗತಿಸಿದೆ.

ಹೌದು, ‘ಚೌಕಿದಾರ್’ ಸಿನಿಮಾಕ್ಕೀಗ ಬಹುಭಾಷಾ ನಟ ಸಾಯಿಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಈ ಬಗ್ಗೆ ಪೋಸ್ಟರ್‌ ಒಂದನ್ನು ಬಿಡುಗಡೆ ಮಾಡಿರುವ ಚಿತ್ರತಂಡ, ಡೈಲಾಗ್‌ ಕಿಂಗ್‌ ಸಾಯಿಕುಮಾರ್‌ ಅವರು ʼಚೌಕಿದಾರ್‌ʼ ಸಿನಿಮಾದಲ್ಲಿ ಅಭಿನಯಿಸುತ್ತಿರುವ ಸುದ್ದಿಯನ್ನು ಅಧಿಕೃತವಾಗಿ ಖಚಿತಪಡಿಸಿದೆ. ಆದರೆ ಡೈಲಾಗ್ ಕಿಂಗ್ ಸಾಯಿಕುಮಾರ್‌ ಅವರ ಪಾತ್ರದ ಬಗ್ಗೆ ಚಿತ್ರತಂಡ ಹೆಚ್ಚಿನ  ಗುಟ್ಟು ಬಿಟ್ಟುಕೊಟ್ಟಿಲ್ಲ.

ಕನ್ನಡದಲ್ಲಿ ‘ಆನೆ ಪಟಾಕಿ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿಯಾಗಿ, ‘ರಥಾವರ’, ‘ತಾರಕಾಸುರ’ ಸಿನಿಮಾಗಳನ್ನು ನಿರ್ದೇಶಿಸಿ ಯಶಸ್ವಿಯಾಗಿರುವ ನಿರ್ದೇಶಕ ಚಂದ್ರಶೇಖರ್‌ ಬಂಡಿಯಪ್ಪ ‘ಚೌಕಿದಾರ’ ಸಿನಿಮಾದ ಸೂತ್ರಧಾರರು. ಈವರೆಗೆ ಸಿನಿಮಾದಲ್ಲಿ ಲವರ್‌ ಬಾಯ್‌ನಂತೆ ಕಾಣಿಸಿಕೊಂಡಿರುವ ಪೃಥ್ವಿ ಅಂಬಾರ್‌ ಈ ಚಿತ್ರದಲ್ಲಿ ಆಕ್ಷನ್ ಸೀಕ್ವೆನ್ಸ್ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ, ಹಾಗಂತ ‘ಚೌಕಿದಾರ್’ ಕಂಪ್ಲೀಟ್ ಆಕ್ಷನ್ ಸಿನಿಮಾವಲ್ಲ. ಪಕ್ಕ ಫ್ಯಾಮಿಲಿ ಎಂಟರ್ ಟೈನರ್.

‘ವಿದ್ಯಾ ಶೇಖರ್ ಎಂಟರ್ಟೈನ್ಮೆಂಟ್’ ಬ್ಯಾನರ್ ಅಡಿಯಲ್ಲಿ ಕಲ್ಲಹಳ್ಳಿ ಚಂದ್ರಶೇಖರ್ ‘ಚೌಕಿದಾರ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್‌ ಬಸ್ರೂರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದು, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ. ಇದೇ ಜುಲೈ ಮೊದಲ ವಾರ ‘ಚೌಕಿದಾರ್’ ಸಿನಿಮಾ ಮುಹೂರ್ತ ನೆರವೇರಿಸಲು ಚಿತ್ರತಂಡ ಯೋಜನೆ ಹಾಕಿದೆ. ಎಲ್ಲ ಅಂದುಕೊಂಡಂತೆ ನಡೆದರೆ, ಈ ವರ್ಷದ ಕೊನೆಯೊಳಗೆ ʼಚೌಕಿದಾರ್‌ʼ ಸಿನಿಮಾವನ್ನು ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

Related Posts

error: Content is protected !!