Quick ಸುದ್ದಿಗೆ ಒಂದು click

ರಾಮ್‌ ಚರಣ್‌ ನಿರ್ಮಾಣದ ʼದಿ ಇಂಡಿಯನ್‌ ಹೌಸ್‌ʼ ಚೊಚ್ಚಲ ಚಿತ್ರಕ್ಕೆ ಹಂಪಿಯಲ್ಲಿ ಚಾಲನೆ

ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣ ಚಿತ್ರ

ರಾಮ್ ಚರಣ್ ನಿರ್ಮಾಣದ ‘ದಿ ಇಂಡಿಯನ್ ಹೌಸ್’ಗೆ ಮುಹೂರ್ತದ ಸಂಭ್ರಮ.. 

ʼಆರ್‌ ಆರ್‌ ಆರ್‌ʼ ಸಿನಿಮಾದ ಸೂಪರ್‌ ಹಿಟ್‌ ಸಕ್ಸಸ್‌ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಮೆಗಾ ಪವರ್ ಸ್ಟಾರ್ ರಾಮ್ ಚರಣ್, ಇತ್ತೀಚೆಗೆ ʼವಿ ಮೆಗಾ ಪಿಕ್ಚರ್ಸ್ʼ ಎಂಬ ಹೆಸರಿನಲ್ಲಿ ತಮ್ಮದೇ ಆದ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿದ್ದು ಅನೇಕರಿಗೆ ಗೊತ್ತಿರಬಹುದು. ಈಗ ಈ ನಿರ್ಮಾಣ ಸಂಸ್ಥೆಯ ಚೊಚ್ಚಲ ಸಿನಿಮಾಕ್ಕೆ ಚಾಲನೆ ಸಿಕ್ಕಿದೆ. ಹೌದು, ʼವಿ ಮೆಗಾ ಪಿಕ್ಚರ್ಸ್ʼ ಬ್ಯಾನರಿನ ಮೂಲಕ ನಟ ರಾಮ್‌ ಚರಣ್‌ ನಿರ್ಮಾಪಕರಾಗಿ ಗುರುತಿಸಿಕೊಳ್ಳುತ್ತಿದ್ದು, ತಮ್ಮ ನಿರ್ಮಾಣದ ಮೊದಲ ಸಿನಿಮಾ ಆಗಿ ಸಾರ್ವಕರ್ ಜೀವನ ಕಥೆಯನ್ನು ತೆರೆಗೆ ತರಲು ರಾಮ್‌ ಚರಣ್‌ ಸಜ್ಜಾಗಿದ್ದಾರೆ. ಅಂದಹಾಗೆ, ರಾಮ್‌ ಚರಣ್‌ ನಿರ್ಮಾಣದ ಚೊಚ್ಚಲ ಸಿನಿಮಾಕ್ಕೆ ʼದಿ ಇಂಡಿಯಾ ಹೌಸ್ʼ ಎಂದು ಹೆಸರಿಡಲಾಗಿದ್ದು, ಈ ಚಿತ್ರದಲ್ಲಿ ತೆಲುಗಿನ ನಿಖಿಲ್ ಸಿದ್ಧಾರ್ಥ್ ನಾಯಕನಾಗಿ ನಟಿಸಲಿದ್ದಾರೆ. ಇದೇ ಜುಲೈ 2 ರಂದು ಹಂಪಿಯ ವಿರೂಪಾಕ್ಷ ಸನ್ನಿಧಿಯಲ್ಲಿ ʼದಿ ಇಂಡಿಯಾ ಹೌಸ್ʼ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದ್ದು, ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು.

ಸಾವರ್ಕರ್‌ ಕಥೆಗೆ ಪ್ಯಾನ್ ಇಂಡಿಯಾ ಚಿತ್ರ ರೂಪ

ಅಂದಹಾಗೆ, ʼದಿ ಇಂಡಿಯನ್ ಹೌಸ್ʼ ಸಿನಿಮಾ ನೈಜ ಕಥೆಯನ್ನು ಆಧರಿಸಿದ ಸಿನಿಮಾ. ಈ ಸಿನಿಮಾ ತೆಲುಗಿನ ಜೊತೆಗೆ ಹಿಂದಿ, ತಮಿಳು, ಕನ್ನಡ ಮತ್ತು ಮಲೆಯಾಳಂ ಭಾಷೆಗಳಲ್ಲೂ ಏಕಕಾಲಕ್ಕೆ ತೆರೆಗೆ ಬರಲಿದೆ.

ʼದಿ ಕಾಶ್ಮೀರಿ ಫೈಲ್ಸ್ʼ, ʼಕಾರ್ತಿಕೇಯ-2ʼ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಅಭಿಷೇಕ್ ಅಗರ್ವಾಲ್ ತಮ್ಮದೇ ʼಅಭಿಷೇಕ್ ಅಗರ್ವಾಲ್ ಆರ್ಟ್ಸ್ʼ ಬ್ಯಾನರ್ ಹಾಗೂ ರಾಮ್ ಚರಣ್ ಒಡೆತನದ ʼವಿ ಮೆಗಾ ಪಿಕ್ಚರ್ಸ್ʼ ಜಂಟಿಯಾಗಿ ಈ ಚಿತ್ರ ನಿರ್ಮಿಸುತ್ತಿದೆ. ಭಾರತದ ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಘಟನೆಗಳನ್ನು ಆಧರಿಸಿ ‘ದಿ ಇಂಡಿಯಾ ಹೌಸ್’ ವನ್ನು ಕಟ್ಟಿಕೊಡಲಾಗುತ್ತಿದೆ. ಸಿನಿಮಾದಲ್ಲಿ ನಾಯಕ ನಿಖಿಲ್ ಶಿವನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಮ್ ವಂಶಿ ಕೃಷ್ಣ ನಿರ್ದೇಶನದ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ಅನುಪಮ್ ಖೇರ್ ನಟಿಸುತ್ತಿದ್ದಾರೆ. ಅನುಪಮ್ ಅವರು ಶ್ಯಾಮ್‌ಜಿ ಕೃಷ್ಣ ವರ್ಮಾ ಅವರ ಪಾತ್ರ ನಿರ್ವಹಿಸಲಿದ್ದಾರೆ. ನಿಖಿಲ್ ಸಿದ್ದಾರ್ಥ್ ಗೆ ಜೋಡಿಯಾಗಿ ಸಾಯಿ ಮಂಜ್ರೇಕರ್ ಬಣ್ಣ ಹಚ್ಚಲಿದ್ದಾರೆ.

ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಮೂಡಿ ಬರುತ್ತಿರು ʼದಿ ಇಂಡಿಯನ್ ಹೌಸ್ʼ ಸಿನಿಮಾಗೆ ಕ್ಯಾಮೆರಾನ್ ಬ್ರೈಸನ್ ಕ್ಯಾಮೆರಾ ಹಿಡಿಯಲಿದ್ದಾರೆ. ʼಕಾರ್ತಿಕೇಯ 2ʼ ನಂತರ ನಿಖಿಲ್, ಅನುಪಮ್ ಖೇರ್, ʼಅಭಿಷೇಕ್ ಅಗರ್ವಾಲ್ ಆರ್ಟ್ಸ್ʼ ಜೊತೆ ʼದಿ ಇಂಡಿಯಾ ಹೌಸ್ʼ ಸಿನಿಮಾಗಾಗಿ ಮತ್ತೊಮ್ಮೆ ಒಂದಾಗಿದ್ದಾರೆ. ಈ ಚಿತ್ರದ ಮೊದಲ ಹಂತದ ಶೂಟಿಂಗ್ ಜುಲೈ 4ರಿಂದ ಶುರುವಾಗಲಿದೆ. ಎಲ್ಲ ಅಂದುಕೊಂಡಂತೆ ನಡೆದರೆ, ಮುಂದಿನ ವರ್ಷದ ಮಧ್ಯಭಾಗದಲ್ಲಿ ʼದಿ ಇಂಡಿಯನ್ ಹೌಸ್ʼ ಸಿನಿಮಾ ತೆರೆಗೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Related Posts

error: Content is protected !!