Telewalk

‘ಕಲರ್ಸ್ ಕನ್ನಡ’ದಲ್ಲಿ ‘ನನ್ನ ದೇವ್ರು’ ಹೊಸ ಧಾರಾವಾಹಿ ಶುರು…

ಜುಲೈ ಮೊದಲ ವಾರದಿಂದ  ‘ನನ್ನ ದೇವ್ರು’ ಧಾರಾವಾಹಿ ಪ್ರಸಾರ

ಇದೇ ಜುಲೈ 8ರಿಂದ ‘ಕಲರ್ಸ್ ಕನ್ನಡ’ದಲ್ಲಿ ನಿತ್ಯ ಸಂಜೆ 6:30ಕ್ಕೆ ಪ್ರಸಾರ

ಕಿರುತೆರೆಯಲ್ಲಿ ಮತ್ತೊಂದು ಕೌಟುಂಬಿಕ ಧಾರಾವಾಹಿ 

ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ʼಕಲರ್ಸ್ ಕನ್ನಡʼ ಇದೀಗ ‘ನನ್ನ ದೇವ್ರು’ ಎಂಬ ಹೊಸ ಕಥೆಯನ್ನು ಹೊತ್ತು ತಂದಿದೆ. ಜುಲೈ 8ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ನೀವು ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ (6.30 ಕ್ಕೆ) ಆರೂ ವರೆಗೆ ವೀಕ್ಷಿಸಬಹುದು.
ಮತ್ತೆ ಕಿರುತೆರೆಗೆ ಮರಳಿದ ʼಅಶ್ವಿನಿ ನಕ್ಷತ್ರʼ ಖ್ಯಾತಿಯ ಮಯೂರಿ

‘ನನ್ನ ದೇವ್ರು’ ಧಾರಾವಾಹಿಯ ವಿಶೇಷವೆಂದರೆ “ಅಶ್ವಿನಿ ನಕ್ಷತ್ರ’ದಿಂದ ಮನೆಮಾತಾಗಿದ್ದ ಮಯೂರಿ ಮತ್ತೆ ಕಿರುತೆರೆಗೆ ಮರಳಿರುವುದು. ಈ ಧಾರಾವಾಹಿಯಲ್ಲಿ ಮಯೂರಿಯದು ಸಣ್ಣ ಊರಿನ ಬಡ ನರ್ಸ್ ಪಾತ್ರ. ಊರೇ ಮೆಚ್ಚುವ ಉದ್ಯಮಿ ಸಚ್ಚಿದಾನಂದಗೆ ಸೇರಿದ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುವ ಬಡ ಹುಡುಗಿ ಮಯೂರಿ. ಜನಾನುರಾಗಿ ಸಚ್ಚಿದಾನಂದನ ಇಪ್ಪತ್ತು ವರ್ಷದ ಮಗಳಿಗೆ ಅಪ್ಪನನ್ನು ಕಂಡರೆ ಇಷ್ಟವಿಲ್ಲ. ತನ್ನಿಂದ ದೂರಾಗಿ ಬದುಕುತ್ತಿರುವ ಮಗಳ ವಿಶ್ವಾಸವನ್ನು ಮರಳಿ ಗಳಿಸಿಕೊಳ್ಳಲು ಹಲುಬುತ್ತಿರುವ ಸಚ್ಚಿದಾನಂದನ ಬದುಕಲ್ಲಿ ಮಯೂರಿಯ ಪ್ರವೇಶವಾಗುತ್ತದೆ. ತಾನು ಆರಾಧಿಸುವ ಸಚ್ಚಿದಾನಂದ್ ಬಾಳನ್ನು ಸರಿದಾರಿಗೆ ತರುವ ಹಾದಿಯಲ್ಲಿ ಮಯೂರಿ ಎದುರಿಸುವ ಸವಾಲುಗಳೇನು ಎಂಬುದೇ ಮುಂದಿನ ಕತೆ. ಸುತ್ತಲಿನವರ ಸಂಚುಗಳಿಂದ ಮಯೂರಿ ಹೇಗೆ ಸಚ್ಚಿದಾನಂದನನ್ನು ಕಾಪಾಡುತ್ತಾಳೆ ಎಂಬುದು ಕುತೂಹಲ.

‘ನನ್ನ ದೇವ್ರು’ ಧಾರಾವಾಹಿಯಲ್ಲಿ ಬೃಹತ್‌ ಕಲಾವಿದರ ತಾರಾಗಣ

‘ಅಶ್ವಿನಿ ನಕ್ಷತ್ರ’ದಿಂದ ಹೆಸರಾದ ಮಯೂರಿ ತುಂಬಾ ವರ್ಷಗಳ ನಂತರ ಟಿವಿಗೆ ಮರಳಿ ‘ನನ್ನ ದೇವ್ರು’ ನಾಯಕಿಯಾಗಿದ್ದಾರೆ. ನಾಯಕನಾಗಿ ನಟಿಸುತ್ತಿರುವ ಅವಿನಾಶ್ ದಿವಾಕರ್ ಹಾಸ್ಯಚಕ್ರವರ್ತಿ ನರಸಿಂಹರಾಜು ಅವರ ಮೊಮ್ಮಗ ಅನ್ನುವುದು ಇನ್ನೊಂದು ವಿಶೇಷ. ಇವರೊಟ್ಟಿಗೆ ಯುಕ್ತಾ ಮಲ್ನಾಡ್, ಸ್ವಾತಿ, ವಿ ಮನೋಹರ್, ರೇಖಾದಾಸ್, ನಿಶ್ಚಿತಾ ಗೌಡ, ಮಾಲತಿ ಸುಧೀರ್, ಯಮುನಾ ಶ್ರೀನಿಧಿ, ರವಿ ಬ್ರಹ್ಮ, ಅಭಿಷೇಕ್ ಶ್ರೀಕಾಂತ್ ಹೀಗೆ ‘ನನ್ನ ದೇವ್ರು’ ತಾರಾಗಣದಲ್ಲಿ ಜನಪ್ರಿಯ ನಟ ನಟಿಯರು ತುಂಬಾನೇ ಇದ್ದಾರೆ.

‘ನನ್ನ ದೇವ್ರು’ ಮೇಲೆ ʼಕಲರ್ಸ್ ಕನ್ನಡʼ ವಾಹಿನಿಗೆ ಭರಪೂರ ನಿರೀಕ್ಷೆ
ಈ ಮೊದಲು ‘ಒಲವಿನ ನಿಲ್ದಾಣ’ ಮೊದಲಾದ ಒಂದಷ್ಟು  ಕಿರುತೆರೆಯ ಧಾರಾವಾಹಿಗಳನ್ನು ನಿರ್ಮಿಸಿದ್ದ ಶ್ರುತಿ ನಾಯ್ಡು, ‘ನನ್ನ ದೇವ್ರು’ ಧಾರಾವಾಹಿಯನ್ನು ನಿರ್ಮಿಸುತ್ತಿದ್ದಾರೆ. ಇತ್ತೀಚಿಗೆ ʼಕೋಟಿʼ ಸಿನಿಮಾದಲ್ಲಿ ಬೆಳ್ಳಿತೆರೆಯ ಮೇಲೆ ಖಳನಟನಾಗಿ ಗಮನ ಸೆಳೆಯುತ್ತಿರುವ ರಮೇಶ್ ಇಂದಿರಾ ‘ನನ್ನ ದೇವ್ರು’ ಧಾರಾವಾಹಿಯನ್ನು ನಿರ್ದೇಶಿಸುತ್ತಿದ್ದಾರೆ.

ಈ ಹೊಸ ಧಾರಾವಾಹಿ ಬಗ್ಗೆ ಉತ್ಸುಕತೆ ತೋರಿದ ʼಕಲರ್ಸ್ ಕನ್ನಡʼದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್, ‘ಸದಾ ಹೊಸತನಕ್ಕಾಗಿ ತುಡಿಯುವ ʼಕಲರ್ಸ್ ಕನ್ನಡʼ ಈ ಹೊಸ ಧಾರಾವಾಹಿಯ ಮುಖಾಂತರ ಮುಗ್ಧತೆ ಮತ್ತು ಪ್ರಾಮಾಣಿಕತೆ ತಂದೊಡ್ಡುವ ಸವಾಲುಗಳ ಕತೆಯೊಂದನ್ನು ವೀಕ್ಷಕರಿಗೆ ಉಣಬಡಿಸಲಿದೆ’ ಎಂದು ಹೇಳಿದ್ದಾರೆ. ʼಕಲರ್ಸ್ ಕನ್ನಡʼದಲ್ಲಿ ಜುಲೈ 8ರ ಸಂಜೆ ಆರೂವರೆಗೆ ‘ನನ್ನ ದೇವ್ರು’ ಧಾರಾವಾಹಿಯ ಮೊದಲ ಕಂತು ಪ್ರಸಾರವಾಗಲಿದೆ. ಇದನ್ನು ನೀವು ʼಜಿಯೋ ಸಿನಿಮಾʼ ಮುಖಾಂತರ ನಿಮ್ಮ ಫೋನಿನಲ್ಲೂ ನೋಡಬಹುದಾಗಿದೆ.

G S Karthik Sudhan

Karthik Sudhan is a name that is familiar in journalistic circles and has rendered valuable service for many significant years. Known for his vast knowledge and work in the field of cinema, crime, investigation and politics, Karthik Sudhan has worked in reputed online publications of Kannada.

Related Posts

error: Content is protected !!