‘ಭೈರವ’ನಾದ ಶಿವಣ್ಣ; ‘ಕೊನೆ ಪಾಠ’ದ ಮೊದಲ ನೋಟವಿದು..!

ಶಿವರಾಜಕುಮಾರ್ ಹೊಸ ಸಿನೆಮಾಕ್ಕೆ ಟೈಟಲ್ ಫಿಕ್ಸ್
ಹ್ಯಾಟ್ರಿಕ್ ಹೀರೋ ಮುಂದಿನ ಸಿನೆಮಾ ‘ಭೈರವನ ಕೊನೆ ಪಾಠ’
‘ಭೈರವನ ಕೊನೆ ಪಾಠ’ದ ಫಸ್ಟ್‌ಲುಕ್ ಔಟ್…
ನಟ ಶಿವರಾಜಕುಮಾರ್ ಅಭಿನಯದ ಹೊಸ ಸಿನೆಮಾಕ್ಕೆ ‘ಭೈರವನ ಕೊನೆ ಪಾಠ’ ಎಂದು ಹೆಸರಿಟ್ಟಿರುವುದು ಅನೇಕರಿಗೆ ಗೊತ್ತಿರಬಹುದು. ಕೆಲ ದಿನಗಳ ಹಿಂದಷ್ಟೇ ಚಿತ್ರತಂಡ ‘ಭೈರವನ ಕೊನೆ ಪಾಠ’ ಸಿನೆಮಾದ ಟೈಟಲ್ ಅನ್ನು ಸೋಶಿಯಲ್ ಮೀಡಿಯಾಗಳ ಮೂಲಕ ಅಧಿಕೃತವಾಗಿ ಘೋಷಿಸಿತ್ತು. ಇದೀಗ ಚಿತ್ರತಂಡ ‘ಭೈರವನ ಕೊನೆ ಪಾಠ’ ಸಿನೆಮಾದ ಫಸ್ಟ್‌ಲುಕ್ ಅನ್ನು ಬಿಡುಗಡೆ ಮಾಡಿದೆ.
‘ಭೈರವನ ಕೊನೆ ಪಾಠ’ದ ಫಸ್ಟ್ ಲುಕ್‌ನಲ್ಲಿ ಯುದ್ಧಕ್ಕೆ ಹೊರಟು ನಿಂತ ಶಿವಣ್ಣ.!

ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ ಫಸ್ಟ್‌ಲುಕ್

ಹೇಮಂತ್ ರಾವ್ – ಶಿವರಾಜಕುಮಾರ್ ಕಾಂಬಿನೇಶನ್ ಸಿನೆಮಾ…
‘ಭೈರವನ ಕೊನೆ ಪಾಠ’ ಬಗ್ಗೆ ನಿರ್ದೇಶಕ ಹೇಮಂತ್ ರಾವ್ ಏನಂತಾರೆ?
ನಿರ್ದೇಶಕ ಹೇಮಂತ್ ಎಂ. ರಾವ್ ಅವರ ಸಿನೆಮಾಗಳ ಶೀರ್ಷಿಕೆಗಳು ಯಾವಾಗಲೂ ವಿಶಿಷ್ಟವಾಗಿರುತ್ತವೆ. ಇದರ ಬಗ್ಗೆ ಪ್ರಶ್ನಿಸಿದಾಗ ಅವರು, ʼನಮ್ಮ ಆಡುಭಾಷೆಗೆ ಹತ್ತಿರವಾದ ಶೀರ್ಷಿಕೆಗಳು ನನಗೆ ಇಷ್ಟವಾಗುತ್ತವೆ. ಈ ಹಿಂದೆ ಕನ್ನಡ ಸಿನೆಮಾ ಶೀರ್ಷಿಕೆಗಳು ಕೇಳಲಿಕ್ಕೂ ಮಧುರವಾಗಿದ್ದು ಕುತೂಹಲ ಕೆರಳಿಸುವಂತೆ ಇರುತ್ತಿದ್ದವು. ನನ್ನ ನಿರ್ದೇಶನದ ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಕವಲುದಾರಿ’, ಸಪ್ತ ಸಾಗರದಾಚೆ ಎಲ್ಲೋ’ ಸಿನೆಮಾ ಶೀರ್ಷಿಕೆಗಳು ಸಾಕಷ್ಟು ಜನ ಮೆಚ್ಚುಗೆಗೆ ಪಾತ್ರವಾದವು. ‘ಭೈರವನ ಕೊನೆ ಪಾಠ’ ಕೂಡಾ ಆ ಸಾಲಿಗೆ ಸೇರಲಿದೆ. ಕನ್ನಡ ಸಿನೆಮಾ ಜಗತ್ತಿನ ವಿಶಿಷ್ಟ ಶೀರ್ಷಿಕೆಗಳ ಪರಂಪರೆಯನ್ನು ಮುಂದಿನ ತಲೆಮಾರುಗಳಿಗೂ ತಲುಪಿಸುವ ಉದ್ದೇಶ ನಮ್ಮದು. ಅದರಲ್ಲೂ ನಾನು ಬಹಳವಾಗಿ ಇಷ್ಟಪಡುವ ಶಿವಣ್ಣ ಅವರ ಸಿನೆಮಾ ಶೀರ್ಷಿಕೆಗಳ ಸೌಂದರ್ಯವನ್ನು ಸದಾ ಕಾಲ ನೆನಪಿರುವಂತೆ ಮಾಡುವುದು ನನ್ನ ಬಯಕೆ. ಈ ಚಿತ್ರದಲ್ಲಿ ಭೈರವನೇ ಕೇಂದ್ರ ಪಾತ್ರವಾಗಿದ್ದು, ನಮ್ಮ ಶೀರ್ಷಿಕೆ ಅಚ್ಚುಕಟ್ಟಾಗಿ ಹೊಂದುತ್ತದೆ. ಅವನು ಮಾಡುವ ಪಾಠ ಯಾವುದು? ಅದನ್ನು ಕೊನೆ ಪಾಠ ಅಂದಿರೋದು ಯಾಕೆ ಅನ್ನುವುದೇ ಇದರ ಮುಖ್ಯ ತಿರುಳು. ನಮ್ಮ ಶೀರ್ಷಿಕೆ ವೀಕ್ಷಕರಲ್ಲಿ ಈ ಪ್ರಶ್ನೆಗಳನ್ನು ಯಶಸ್ವಿಯಾಗಿ ಹುಟ್ಟುಹಾಕುತ್ತದೆ ಅನ್ನುವುದು ನಮ್ಮ ನಂಬಿಕೆʼ ಎಂದು ‘ಭೈರವನ ಕೊನೆ ಪಾಠ’ ಸಿನೆಮಾದ ಟೈಟಲ್ ಮಾತ್ತು ಕಥಾಹಂದರದ ಬಗ್ಗೆ ವಿವರಣೆ ನೀಡುತ್ತಾರೆ.