Street Beat

ರಾಜವರ್ಧನ್ ‘ಹಿರಣ್ಯ’ನಿಗೆ ಡಾಲಿ ಧನಂಜಯ್-ರಾಗಿಣಿ ಸಾಥ್…

ಹೊರಬಂತು ‘ಹಿರಣ್ಯ’ನ ಔಟ್‌ ಆ್ಯಂಡ್‌ ಔಟ್‌ ಮಾಸ್ ಟ್ರೇಲರ್

ಅನಾವರಣ..ಗೆಳೆಯನ ಸಿನಿಮಾಗೆ ಸಾಥ್ ಕೊಟ್ಟ ಡಾಲಿ ಧನಂಜಯ್

ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಚಿತ್ರರಂಗದಲ್ಲಿ ಒಂದಷ್ಟು ನಿರೀಕ್ಷೆ ಮೂಡಿಸಲು ಯಶಸ್ವಿಯಾಗಿರುವ ‘ಹಿರಣ್ಯ’ ಸಿನೆಮಾದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ‘ಹಿರಣ್ಯ’ ಸಿನೆಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಡಾಲಿ ಧನಂಜಯ್, ನಟಿ ರಾಗಿಣಿ ದ್ವಿವೇದಿ ವಿಶೇಷ ಅತಿಥಿಯಾಗಿ ಭಾಗಿಯಾಗಿ ನಾಯಕ ರಾಜವರ್ಧನ್ ಹೊಸ ಸಿನೆಮಾದ ಪ್ರಯತ್ನಕ್ಕೆ ಬೆಂಬಲ ನೀಡಿದರು. ಈ ವೇಳೆ ಇಡೀ ‘ಹಿರಣ್ಯ’ ಚಿತ್ರತಂಡದ ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗಿದ್ದರು.

‘ಹಿರಣ್ಯ’ನಿಗೆ ಡಾಲಿ – ರಾಗಿಣಿ ಶುಭ ಹಾರೈಕೆ

ಟ್ರೇಲರ್ ಬಿಡುಗಡೆ ಬಳಿಕ ನಟ ಡಾಲಿ ಧನಂಜಯ್ ಮಾತನಾಡಿ, ”ಹಿರಣ್ಯ’  ಹಾಗೂ ರಾಜು ಇಡೀ ತಂಡಕ್ಕೆ ಆಲ್ ದಿ ಬೆಸ್ಟ್. ರಾಜವರ್ಧನ್ ನನಗೆ 10 ವರ್ಷದಿಂದ ಪರಿಚಯ. 2013 ಅಥವಾ 2012 ರಲ್ಲಿ ಇಬ್ಬರು ಸಿನೆಮಾವೊಂದಕ್ಕೆ ಫೋಟೋಶೂಟ್ ಮಾಡಿಸಿದ್ದೇವು. ಆದರೆ ಅದು ಸಿನೆಮಾವಾಗಲಿಲ್ಲ. ಜೆ.ಪಿ ನಗರ, ಜಯನಗರಕ್ಕೆ ಬಂದಾಗಲೆಲ್ಲಾ ಸಿಗುತ್ತಾರೆ. ಜರ್ನಿ ನೆನಪು ಮಾಡಿಕೊಂಡಾಗ ಅವತ್ತಿನಿಂದ ಇವತ್ತಿನವರೆಗೂ ನಟನಾಗಿ ನಿಲ್ಲುವ ಪ್ರಯತ್ನ ಮಾಡುತ್ತಿದ್ದಾನೆ. ಒಳ್ಳೆ ಬರವಣಿಗೆ, ಸ್ಕ್ರೀಪ್ಟ್, ನಿರ್ದೇಶಕರು, ಅದನ್ನು ಅಷ್ಟೇ ಚೆನ್ನಾಗಿ ಪ್ರೀತಿಸುವ ನಿರ್ಮಾಪಕರು ಇದ್ದಾಗ ಮಾತ್ರ ಒಳ್ಳೆ ಸಿನೆಮಾವಾಗುತ್ತದೆ. ರಾಜವರ್ಧನ್ ‘ಹಿರಣ್ಯ’ ಸಿನೆಮಾ ಮೂಲಕ ಒಳ್ಳೆ ಶುಕ್ರವಾರ ಸಿಗಲಿ. ನಿರ್ಮಾಪಕರು ತುಂಬಾ ಫ್ಯಾಷನೇಟೆಡ್ ಇದ್ದಾರೆ. ಸಿನಿಮಾ ಚೆನ್ನಾಗಿ ಆಗಲಿ’ ಎಂದು ಶುಭ ಹಾರೈಸಿದರು,

ನಟ ರಾಗಿಣಿ ಮಾತನಾಡಿ, ‘ತುಂಬಾ ಖುಷಿಯಾಗುತ್ತಿದೆ. ಹೊಸ ತಂಡ ಇಂಡಸ್ಟ್ರೀಗೆ ಎಂಟ್ರಿಯಾಗುತ್ತಿರುವುದು. ತುಂಬಾ ಅದ್ಭುತವಾಗಿ ಟೆಕ್ನಿಕಲ್ ಆಗಿ, ಕಲರ್ ಫುಲ್ ಆಗಿರುವ ಟ್ಯಾಲೆಂಟೆಂಡ್ ಟೀಂ ಎಂಟ್ರಿಯಾಗುತ್ತಿರುವುದು ಖುಷಿ. ಹೊಸದಾಗಿ ಸಿನಿಮಾ ಮಾಡುವುದು ತುಂಬಾ ಚಾಲೆಂಜಿಂಗ್ ಕೆಲಸ. ಹೊಸದಾಗಿ ಪ್ರಯತ್ನ ಮಾಡುವುದು ಸುಲಭವಲ್ಲ. ಬೇರೆ ಇಂಡಸ್ಟ್ರೀಗೆ ಹೋಲಿಕೆ ಮಾಡಿದರೆ ನಮ್ಮ ಇಂಡಸ್ಟ್ರೀಯಲ್ಲಿ ಹೊಸಬರಿಗೆ ಸಾಕಷ್ಟು ಅವಕಾಶವಿದೆ. ರಾಜ್ ಹೊಸಬಗೆಯ ಪಾತ್ರ ಮಾಡುತ್ತಾರೆ. ನನಗೆ ಹೆಮ್ಮೆ ಎನಿಸುತ್ತದೆ. ನಿಮಗೆ ಪ್ರೇಕ್ಷಕರು ಪ್ರೀತಿ ಕೊಡ್ತಾರೆ. ಇಡೀ ತಂಡಕ್ಕೆ ಒಳ್ಳೆದಾಗಲಿ’ ಎಂದು ತಿಳಿಸಿದರು.

ಎಲ್ಲರ ಕನಸು ‘ಹಿರಣ್ಯ’ನ ಮೇಲಿದೆ…

ನಟ ರಾಜವರ್ಧನ್ ಮಾತನಾಡಿ, ‘ಶಿವಣ್ಣ ಟ್ರೇಲರ್ ನೋಡಿ ಇಷ್ಟಪಟ್ಟು ಮನೆಗೆ ಕರೆಸಿ ಇಡೀ ತಂಡಕ್ಕೆ ಒಳ್ಳೆ ಉಪಚಾರ ಮಾಡಿದ್ದು ಖುಷಿಯಾಯ್ತು. ‘ಹಿರಣ್ಯ’ ಒಳ್ಳೆ ಸ್ಟೋರಿ ಲೈನ್. ನಾನು ಅದನ್ನು ನಂಬಿದೆ. ಒಳ್ಳೆ ಸಿನೆಮಾವಾಗಿದೆ. ಸಿನೆಮಾಗೆ ಒಳ್ಳೆ ಟೈಟಲ್ ಬೇಕಿತ್ತು. ಅದು ಧನು (ಡಾಲಿ ಧನಂಜಯ್‌) ಬಳಿ ಇತ್ತು. ಅವರು ಅದನ್ನು ಕೇಳಿದ ತಕ್ಷಣ ಕೊಟ್ಟರು. ಎಲ್ಲೂ ಏನು ಮೋಸವಾಗದೆ ಸಿನಿಮಾ ಮಾಡಿದ್ದೇವೆ. ನಮ್ಮ ನಿರ್ಮಾಪಕರು ವಿಜಿ ನಾನು ತುಂಬಾ ಕಿತ್ತಾಡಿದ್ದೇವೆ. ಪ್ರೊಡ್ಯೂಸರ್ ತುಂಬಾ ಕನಸು ಇಟ್ಟುಕೊಂಡು ಬಂದಿದ್ದಾರೆ. ಅವರು ಹಾಕಿದ ದುಡ್ಡು ರಿರ್ಟನ್ ಆಗಬೇಕು ಅನ್ನುವುದು ನಮ್ಮ ಜವಾಬ್ದಾರಿ. ನಿರ್ದೇಶಕರು ಹೊಸ ಕನಸು ಇಟ್ಟುಕೊಂಡು ಬಂದಿದ್ದಾರೆ. ಹೊಸತಂಡ ಸಿನೆಮಾ ಕಲಿತು ಮಾಡಿದ್ದಾರೆ. ಇಡೀ ತಂಡ ಎಫರ್ಟ್ ಹಾಕಿ ಚಿತ್ರ ಮಾಡಿದ್ದಾರೆ’ ಎಂದರು.

 ಜುಲೈ 19ಕ್ಕೆ ತೆರೆಮೇಲೆ ‘ಹಿರಣ್ಯ’ನ ಆಗಮನ

ಅಂದಹಾಗೆ, ಇದೇ ಜುಲೈ 19ಕ್ಕೆ ‘ಹಿರಣ್ಯ’ ಸಿನೆಮಾ ತೆರೆಗೆ ಬರಲಿದೆ. ಜಾಕ್ ಮಂಜು ಒಡೆತನದ ‘ಶಾಲಿನಿ ಆರ್ಟ್ಸ್’ ರಾಜ್ಯಾದ್ಯಂತ ‘ಹಿರಣ್ಯ’ ಸಿನೆಮಾ ವಿತರಣೆ ಮಾಡಲಿದ್ದಾರೆ. ನಿರ್ದೆಶಕ ಪ್ರವೀಣ್ ಅವ್ಯೂಕ್, ಕ್ರೂರ ಗುಣ ಹೊಂದಿದ ಪಾತ್ರವನ್ನಿಟ್ಟುಕೊಂಡು ‘ಹಿರಣ್ಯ’ ಸಿನೆಮಾದ ಕಥೆ ಹೆಣೆದಿದ್ದಾರೆ.ನಾಯಕ ನಟ ರಾಜವರ್ಧನ್ ಗೆ ಜೋಡಿಯಾಗಿ ರಿಹಾನಾ ನಟಿಸಿದ್ದಾರೆ. ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದು, ಉಳಿದಂತೆ ಹುಲಿ ಕಾರ್ತಿಕ್‌, ಅರವಿಂದ್ ರಾವ್‌, ದಿಲೀಪ್‌ ಶೆಟ್ಟಿ ಮುಂತಾದವರು ‘ಹಿರಣ್ಯ’ ಸಿನೆಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

G S Karthik Sudhan

Karthik Sudhan is a name that is familiar in journalistic circles and has rendered valuable service for many significant years. Known for his vast knowledge and work in the field of cinema, crime, investigation and politics, Karthik Sudhan has worked in reputed online publications of Kannada.

Related Posts

error: Content is protected !!