ಕಿಚ್ಚ ಸುದೀಪ್ ಅಭಿನಯದ ‘ಮ್ಯಾಕ್ಸ್’ ಟೀಸರ್ ಔಟ್…!

ಮಾಸ್ ಟೀಸರ್ ಬಿಡುಗಡೆ ಮಾಡಿದ ‘ಮ್ಯಾಕ್ಸ್’ ಚಿತ್ರತಂಡ
ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್…
ನಟ ಕಿಚ್ಚ ಸುದೀಪ್ ಅಭಿನಯದ ಮುಂಬರುವ ಬಹು ನಿರೀಕ್ಷಿತ ‘ಮ್ಯಾಕ್ಸ್’ ಸಿನೆಮಾದ ಮೊದಲ ಟೀಸರ್ ಜುಲೈ 16 ರಂದು ಬಿಡುಗಡೆಯಾಗಿದೆ. ಕನ್ನಡದ ಜೊತೆಗೆ ತಮಿಳು, ತೆಲುಗು, ಮಲೆಯಾಳಂ ಮತ್ತು ಹಿಂದಿ ಭಾಷೆಗಳಲ್ಲೂ ‘ಮ್ಯಾಕ್ಸ್’ ಸಿನೆಮಾ ತೆರೆಗೆ ಬರುತ್ತಿದ್ದು, ಏಕಕಾಲಕ್ಕೆ ಐದು ಭಾಷೆಗಳಲ್ಲಿ ‘ಮ್ಯಾಕ್ಸ್’ ಸಿನೆಮಾದ ಟೀಸರ್ ಬಿಡುಗಡೆಯಾಗಿದೆ. ಇನ್ನು ಬಿಡುಗಡೆಯಾಗಿರುವ ‘ಮ್ಯಾಕ್ಸ್’ ಸಿನೆಮಾದ ಮೊದಲ ಟೀಸರ್ ನಲ್ಲಿ ಭರ್ಜರಿ ಆ್ಯಕ್ಷನ್ ದೃಶ್ಯಗಳ ಝಲಕ್ ಎದ್ದು ಕಾಣುತ್ತಿದ್ದು, ‘ಮ್ಯಾಕ್ಸ್’ ಸಿನೆಮಾದ ಮೊದಲ ಟೀಸರ್ ಮಾಸ್ ಆಡಿಯನ್ಸ್ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.
‘ಮ್ಯಾಕ್ಸ್’ ಟೀಸರಿನಲ್ಲಿ ಭರ್ಜರಿ ಆ್ಯಕ್ಷನ್ ದೃಶ್ಯಗಳ ಝಲಕ್!
ವಿಜಯ್ ಕಾರ್ತಿಕೇಯ ನಿರ್ದೇಶನದ ಆ್ಯಕ್ಷನ್-ಥ್ರಿಲ್ಲರ್ ಕಥಾಹಂದರದ ‘ಮ್ಯಾಕ್ಸ್’ ಸಿನೆಮಾದಲ್ಲಿ ನಟ ಕಿಚ್ಚ ಸುದೀಪ್ ಅವರಿಗೆ ತಮಿಳಿನ ವರಲಕ್ಷ್ಮೀ ಶರತ್ ಕುಮಾರ್ ನಾಯಕಿಯಾಗಿ ಜೋಡಿಯಾಗಿದ್ದಾರೆ. ಉಳಿದಂತೆ ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ ಮುಂತಾದವರು ‘ಮ್ಯಾಕ್ಸ್’ ಸಿನೆಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್’ ಬ್ಯಾನರ್ ಅಡಿಯಲ್ಲಿ ಹಾಗೂ ಕಿಚ್ಚ ಸುದೀಪ್ ಅವರ ‘ಕಿಚ್ಚ ಕ್ರಿಯೇಷನ್ಸ್’ ಬ್ಯಾನರ್ ಅಡಿಯಲ್ಲಿ ‘ಮ್ಯಾಕ್ಸ್’ ಸಿನೆಮಾವನ್ನು ನಿರ್ಮಿಸಲಾಗಿದೆ.