ವಾಣಿಜ್ಯ ಮಂಡಳಿ ನಿಯೋಗದಿಂದ ಸರ್ಕಾರಕ್ಕೆ ಅವಾಹಲು

‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’ ನಿಯೋಗದಿಂದ ಮುಖ್ಯಮಂತ್ರಿ, ಗೃಹ ಸಚಿವರ ಭೇಟಿ
ಚಿತ್ರರಂಗದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಮಯಾವಕಾಶಕ್ಕೆ ಮನವಿ
ವಾಣಿಜ್ಯ ಮಂಡಳಿ ನೂತನ ಪದಾಧಿಕಾರಿಗಳಿಂದ ಸರ್ಕಾರಕ್ಕೆ ಮನವಿ
ಬೆಂಗಳೂರು: 23 ಡಿ. ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’ (ಕೆ.ಎಫ್.ಸಿ.ಸಿ)ಯ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ನಿಯೋಗ ಸೋಮವಾರ (ಡಿ. 23) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿತು. ಇತ್ತೀಚಿಗೆ ನಡೆದ ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’ (ಕೆ.ಎಫ್.ಸಿ.ಸಿ) ಯ ಚುನಾವಣೆಯಲ್ಲಿ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಆಯ್ಕೆಯಾಗಿದ್ದರು. ಈ ಬಾರಿ ನೂತನವಾಗಿ ಆಯ್ಕೆಯಾದ ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’ಯ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಂಪ್ರದಾಯದಂತೆ ಸಿ. ಎಂ. ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಅಭಿನಂದಿನೆ ಸಲ್ಲಿಸಿದರು.
ನಿಯೋಗದಲ್ಲಿ ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’ಯ ನೂತನ ಅಧ್ಯಕ್ಷ ಎಂ. ನರಸಿಂಹಲು, ಉಪಾಧ್ಯಕ್ಷರಾದ ಕೆ. ವಿ. ವೆಂಕಟೇಶ್, ಶಿಲ್ಪ ಶ್ರೀನಿವಾಸ್, ಕೆ. ಓ. ರಂಗಪ್ಪ, ಗೌರವ ಕಾರ್ಯದರ್ಶಿಗಳಾದ ಡಿ. ಕೆ. ರಾಮಕೃಷ್ಣ, ಎಂ. ಎನ್. ಕುಮಾರ್, ಎಲ್. ಸಿ. ಕುಶಾಲ್ ಹಾಗೂ ಖಜಾಂಚಿ ಬಿ. ಮಹದೇವ್ ಮತ್ತು ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’ ಮಾಜಿ ಅಧ್ಯಕ್ಷರು ಹಾಗೂ ಕನ್ನಡ ಪರ ಹೋರಾಟಗಾರರಾದ ಸಾ. ರಾ. ಗೋವಿಂದು ಸೇರಿದಂತೆ ಚಿತ್ರರಂಗದ ಅನೇಕ ಪ್ರಮುಖರು ಹಾಜರಿದ್ದರು.
‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’ ನಿಯೋಗಕ್ಕೆ ಸಕಾರಾತ್ಮಕ ಸ್ಪಂದನೆ
ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಭೇಟಿಯ ವೇಳೆ ಚಿತ್ರರಂಗದ ಕೆಲವು ಸಮಸ್ಯೆಗಳ ಬಗ್ಗೆ ಚರ್ಚಿಸಿದ ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’ಯ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ನಿಯೋಗ, ಚಿತ್ರರಂಗದ ಸಮಸ್ಯೆಗಳ ಬಗ್ಗೆ ಹೆಚ್ಚಿನ ಚರ್ಚೆಯ ಸಲುವಾಗಿ ಹೆಚ್ಚಿನ ಸಮಯಾವಕಾಶವನ್ನು ನೀಡಬೇಕೆಂದು ಮನವಿ ಮಾಡಿಕೊಂಡಿತು. ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ನಿಯೋಗಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಶೀಘ್ರದಲ್ಲಿಯೇ ಈ ಬಗ್ಗೆ ಚರ್ಚಿಸಲು ಸಮಯಾವಕಾಶ ನೀಡುವುದಾಗಿ ಭರವಸೆ ನೀಡಿದ್ದಾರೆ.