Street Beat

‘ಕನಸೊಂದು ಶುರುವಾಗಿದೆ’ ಟ್ರೇಲರ್ ಬಿಡುಗಡೆ

‘ಕನಸಿ’ಗೆ ಸಾಥ್ ಕೊಟ್ಟ ಡಾರ್ಲಿಂಗ್ ಕೃಷ್ಣ-ಲೂಸ್ ಮಾದಯೋಗಿ

ಮಾರ್ಚ್ 7ಕ್ಕೆ ‘ಕನಸೊಂದು ಶುರುವಾಗಿದೆ’ ಸಿನೆಮಾ ರಿಲೀಸ್

ಟ್ರೇಲರ್ ನಲ್ಲಿ ‘ಕನಸೊಂದು ಶುರುವಾಗಿದೆ..’ 

‘ಸಹಾರಾ’ ಸಿನೆಮಾದ ಮೂಲಕ ಚಂದವನಕ್ಕೆ ನಿರ್ದೇಶಕನಾಗಿ ಹೆಜ್ಜೆ ಇಟ್ಟಿದ್ದ ಮಂಜೇಶ್ ಈಗ ‘ಕನಸೊಂದು ಶುರುವಾಗಿದೆ’ ಚಿತ್ರದ ಮೂಲಕ ಮತ್ತೊಂದು ಸಸ್ಪೆನ್ಸ್-ಥ್ರಿಲ್ಲರ್ ಕಥೆಯನ್ನು ಪ್ರೇಕ್ಷಕರ ಮುಂದೆ ಹೇಳಲು ರೆಡಿಯಾಗಿದ್ದಾರೆ. ಇದೇ ಮಾರ್ಚ್ 7ರಂದು ‘ಕನಸೊಂದು ಶುರುವಾಗಿದೆ’ ಚಿತ್ರ ತೆರೆಗೆ ಬರುತ್ತಿದ್ದು, ಈಗಾಗಲೇ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ ಇತ್ತೀಚೆಗೆ ಚಿತ್ರದ ಟ್ರೇಲರ್ ಅನ್ನು ಬಿಡುಗಡೆ ಮಾಡಿದೆ. ಇತ್ತೀಚೆಗೆ ನಡೆದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಟರಾದ ಡಾರ್ಲಿಂಗ್ ಕೃಷ್ಣ, ಲೂಸ್ ಮಾದ ಯೋಗಿ, ಸಾಹಸ ನಿರ್ದೇಶಕರ ಥ್ರಿಲರ್ ಮಂಜು ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಹಾಜರಿದ್ದು ‘ಕನಸೊಂದು ಶುರುವಾಗಿದೆ’ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಹೊಸಬರ ಸಿನೆಮಾ ನೋಡಿ ಹಾರೈಸಿ…

ಡಾರ್ಲಿಂಗ್ ಕೃಷ್ಣ ಮಾತನಾಡಿ, ಟೈಟಲ್ ತುಂಬಾ ಇಷ್ಟವಾಯ್ತು. ‘ಈ ಚಿತ್ರದ ಡಿಸೈನ್ ಮಾಡಿರುವ ರೀತಿ ತುಂಬಾ ಚೆನ್ನಾಗಿದೆ. ಮಂಜೇಶ್ ಅವರಿಗೆ ಒಳ್ಳೆಯದಾಗಲಿ. ಇದು ಅವರ ಎರಡನೇ ಚಿತ್ರ. ಇನ್ನೂ ಹೆಚ್ಚು ಒಳ್ಳೆ ಸಿನೆಮಾ ಮಾಡಲಿ . ನಿರ್ಮಾಪಕರಿಗೂ ಕೂಡ ಒಳ್ಳೆದಾಗಲಿ. ಸಂತು ಲೀಡ್ ಆಕ್ಟಿಂಗ್ ಮಾಡಿದ್ದಾರೆ. ಇದು ದೊಡ್ಡ ಜವಾಬ್ದಾರಿ. ಸಿನೆಮಾ ನಿಲ್ಲಿಸುವುದು ಕಷ್ಟದ ಕೆಲಸ. ಮಾರ್ಚ್ 7ಕ್ಕೆ ಸಿನೆಮಾ ತೆರೆಗೆ ಬರುತ್ತಿದೆ. ಚಿತ್ರಮಂದಿರಗಳಲ್ಲಿಯೇ ಕನಸೊಂದು ಶುರುವಾಗಿದೆ ಸಿನೆಮಾವನ್ನು ನೋಡಿ ಹಾರೈಸಿ’ ಎಂದು ತಿಳಿಸಿದರು.

ಜನರಿಗೆ ರೀಚ್‌ ಮಾಡಿಸುವ ಕೆಲಸ ಮಾಡಿ…

ನಟ ಲೂಸ್ ಮಾದಯೋಗಿ ಮಾತನಾಡಿ, ‘ಇಡೀ ಚಿತ್ರತಂಡಕ್ಕೆ ಒಳ್ಳೆದಾಗ್ಲಿ. ಚಿಕ್ಕ ಸಿನೆಮಾ ದೊಡ್ಡ ಸಿನೆಮಾ ಮ್ಯಾಟರ್ ಅಲ್ಲ. ಜನ ನೋಡಬೇಕು. ಚಿಕ್ಕದೋ? ದೊಡ್ಡದೋ? ಅವರು ಡಿಸೈಡ್ ಮಾಡ್ತಾರೆ. ಇವತ್ತಿನ ಪರಿಸ್ಥಿತಿಗೆ ಸಿನೆಮಾ ಮಾಡೋದುವುದು ಸುಲಭ. ಆದರೆ ಅದನ್ನು ತಲುಪಿಸುವುದು ಕಷ್ಟ. ಅದೊಂದು ಫೋಕಸ್ ಆಗಿ ಮಾಡಿ. ಜನರಿಗೆ ರೀಚ್ ಆದರೆ ಸಾಕು. ಆ ಕೆಲಸ ಮಾಡಿ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಚಿಕ್ಕ ಕಥೆಯೊಂದು ದೊಡ್ಡ ಸಿನೆಮಾವಾಗಿದೆ…

ನಿರ್ದೇಶಕರಾದ ಮಂಜೇಶ್ ಭಾಗವತ್ ಮಾತನಾಡಿ, ‘ಇದು ನನ್ನ ಎರಡನೇ ಸಿನೆಮಾ. ಚಿಕ್ಕ ಕಥೆಯಿಂದ ಶುರುವಾದ ಜರ್ನಿ ಇದು. ಅಂದುಕೊಂಡ ಬಜೆಟ್ ಗಿಂತ ಸ್ವಲ್ಪ ಜಾಸ್ತಿ ಬಜೆಟ್ ಆಯ್ತು. ನಿರ್ಮಾಪಕರು ಕೂಡ ಸಾಥ್ ಕೊಟ್ಟರು. ಕನಸೊಂದು ಶುರುವಾಗಿದೆ ಎಂದರೆ ಅಪ್ಪು ಸರ್ ನೆನಪು ಬರ್ತಾರೆ. ಅವರ ಸಿನೆಮಾದ ಹಾಡಿನಲ್ಲಿ ಬರುವ ಲೈನ್ ಇಟ್ಕೊಂಡು ಟೈಟಲ್ ಇಟ್ಟಿದ್ದೇವೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಮೂವೀ. ನೈಜ ಘಟನೆ ಇಟ್ಕೊಂಡು ಸಿನೆಮಾ ಮಾಡಲಾಗಿದೆ’ ಎಂದು ಹೇಳಿದರು.

ಮಾರ್ಚ್‌ ಮೊದಲವಾರ ಕನಸು ನನಸು

‘ಕೆ.ಆರ್‌.ಆರ್‌ ಮೀಡಿಯಾ ಬ್ಯಾನರ್’ ನಡಿ ಲಕ್ಷ್ಮೀ ಕಾಂತ್ ರೆಡ್ಡಿ ನಿರ್ಮಿಸಿರುವ ‘ಕನಸೊಂದು ಶುರುವಾಗಿದೆ’ ಚಿತ್ರದ ಮೂಲಕ ಸಂತೋಷ್ ಬಿಲ್ಲವ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಅವರಿಗೆ ಜೋಡಿಯಾಗಿ ನಟಿ ಸಾತ್ವಿಕಾ ಕಾಣಿಸಿಕೊಂಡಿದ್ದಾರೆ. ಥ್ರಿಲ್ಲರ್ ಮಂಜು, ಕುರಿ ಸುನಿಲ್ , ರಶ್ಮಿ, ರಾಜು ಕಾಲ್ಕುಣಿ, ಕೃಷ್ಣಮೂರ್ತಿ ಕನಕಪುರ, ನಾಗರತ್ನ ಭಟ್ ತಾರಾಬಳಗದಲ್ಲಿದ್ದಾರೆ. ಸಸ್ಪೆನ್ಸ್- ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಕನಸೊಂದು ಶುರುವಾಗಿದೆ’ ಚಿತ್ರವನ್ನು ಬೆಂಗಳೂರು, ಕುಂದಾಪುರ, ಕುಣಿಗಲ್ ಸುತ್ತಮುತ್ತಲ ಭಾಗದಲ್ಲಿ ಚಿತ್ರೀಕರಣ ಮಾಡಲಾಗಿದೆ.

ಮಂಜೇಶ್ ಭಾಗವತ್ ನಿರ್ದೇಶನದಲ್ಲಿ ಮೂಡಿಬಂದಿರುವ ‘ಕನಸೊಂದು ಶುರುವಾಗಿದೆ’ ಚಿತ್ರಕ್ಕೆ ಲೋಕೇಂದ್ರ ಸೂರ್ಯ ಕ್ಯಾಮೆರಾ ಹಿಡಿದಿದ್ದು, ಸೂರಜ್ ಜೋಯಿಸ್ ಸಂಗೀತ, ದೀಪಕ್ ಸಿ. ಎಸ್ ಗೌಡ ಸಂಕಲನ ಜವಾಬ್ದಾರಿ ನಿಭಾಯಿಸಿದ್ದಾರೆ. ಶಶಾಂಕ್, ಸಿಂಪಲ್ ಸುನಿ ಮತ್ತು ಪ್ರಮೋದ್ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆದಿದ್ದು, ಸೋನು ನಿಗಂ, ರಾಜೇಶ್ ಕೃಷ್ಣನ್ ಹಾಗೂ ವಾಸುಕಿ ವೈಭವ್ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಮಾಚ್ 7ಕ್ಕೆ ಧೀರಜ್ ರಾಜ್ಯಾದ್ಯಂತ ‘ಕನಸೊಂದು ಶುರುವಾಗಿದೆ’ ಸಿನೆಮಾವನ್ನು ರಿಲೀಸ್ ಮಾಡಲಿದ್ದಾರೆ. ಒಟ್ಟಾರೆ ಒಂದಷ್ಟು ಕನಸುಗಳನ್ನು ಇಟ್ಟುಕೊಂಡು ತೆರೆಗೆ ಬರುತ್ತಿರುವ ‘ಕನಸೊಂದು ಶುರುವಾಗಿದೆ’ ತೆರೆಮೇಲೆ ಹೇಗಿರಲಿದೆ ಎಂಬುದು ಮಾರ್ಚ್‌ ಮೊದಲ ವಾರ ಗೊತ್ತಾಗಲಿದೆ.

Related Posts

error: Content is protected !!