Quick ಸುದ್ದಿಗೆ ಒಂದು click

ಪುನೀತ್ ರಾಜ್​ಕುಮಾರ್ 50ನೇ ವರ್ಷದ ಜನ್ಮದಿನ

‘ಅಪ್ಪು’ ಸಮಾಧಿ ಸ್ಥಳಕ್ಕೆ ಅಭಿಮಾನಿಗಳು, ಕುಟುಂಬಸ್ಥರ ಭೇಟಿ

ರಾಜ್ಯದಾದ್ಯಂತ ನಟ ಪುನೀತ್ ರಾಜ್​ಕುಮಾರ್​ ಜನ್ಮದಿನ ಆಚರಣೆ

ಅಭಿಮಾನಿಗಳಿಂದ ‘ಅಪ್ಪು’ 50ನೇ ವರ್ಷದ ಬರ್ತ್​ಡೇ ಸೆಲೆಬ್ರೇಷನ್

ನಟ ‘ಪವರ್ ಸ್ಟಾರ್’ ಪುನೀತ್ ರಾಜಕುಮಾರ್​ ಇಂದು ನಮ್ಮೊಂದಿಗೆ ಇದ್ದಿದ್ದರೆ ಅದ್ದೂರಿಯಾಗಿ 50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದರೆ ಅವರಿಲ್ಲದೇ ಅಭಿಮಾನಿಗಳು ಜನ್ಮದಿನ ಆಚರಿಸುವಂತಾಗಿದೆ. ಪ್ರತಿವರ್ಷ ಮಾರ್ಚ್​ 17 ಬಂತೆಂದರೆ ‘ಅಪ್ಪು’ ಅಭಿಮಾನಿಗಳು ಸಂಭ್ರಮಿಸುತ್ತಾರೆ. ಪುನೀತ್ ಅವರ ಬರ್ತ್​ಡೇ ಪ್ರಯುಕ್ತ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಾರೆ. ಈ ಬಾರಿಯೂ ಆ ಕಾರ್ಯ ಮುಂದುವರಿದಿದೆ. ಪುನೀತ್ ರಾಜಕುಮಾರ್​ ಅವರ ಹುಟ್ಟುಹಬ್ಬದ ಪ್ರಯುಕ್ತ ‘ಅಪ್ಪು’ ಅಭಿಮಾನಿಗಳು ಅನ್ನದಾನ, ರಕ್ತದಾನ, ನೇತ್ರದಾನ ಸೇರಿದಂತೆ ಅನೇಕ ಕಾರ್ಯಗಳನ್ನು ಕೈಕೊಳ್ಳುತ್ತಿದ್ದಾರೆ.

ರಾಜ್ಯದಾದ್ಯಂತ ಅಭಿಮಾನಿಗಳಿಂದ ಜನ್ಮದಿನ ಆಚರಣೆ

ಇನ್ನು ರಾಜ್ಯದಾದ್ಯಂತ ಲಕ್ಷಾಂತರ ಅಭಿಮಾನಿಗಳು ನಟ ಪುನೀತ್ ರಾಜ​ಕುಮಾರ್ ಅವರ​ ಜನ್ಮದಿನವನ್ನ ಆಚರಿಸುತ್ತಿದ್ದಾರೆ. 50ನೇ ವರ್ಷದ ಬರ್ತ್​ಡೇ ಆಗಿದ್ದರಿಂದ ಈ ಬಾರಿ ಸ್ಪೆಷಲ್ ಆಗಿ ಆಚರಿಸಲಾಗುತ್ತಿದೆ. ಪುನೀತ್‌ ರಾಜಕುಮಾರ್​ ಅವರ ಸಮಾಧಿ ಸ್ಥಳಕ್ಕೆ ಅಭಿಮಾನಿಗಳು, ಕುಟುಂಬಸ್ಥರು ಹಾಗೂ ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಮರುಬಿಡುಗಡೆಯಾಗಿರುವ ‘ಅಪ್ಪು’ ಸಿನಿಮಾ ಚೆನ್ನಾಗಿ ಪ್ರದರ್ಶನ ಕಾಣುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿಯೂ ಸಹ ಪುನೀತ್ ಅವರಿಗೆ ಜನ್ಮದಿನದ ಶುಭಾಶಯ ಕೋರುವ ಮೂಲಕ ಸ್ಮರಿಸಲಾಗುತ್ತಿದೆ. ಜನ್ಮದಿನದ ಪ್ರಯುಕ್ತ ಅನೇಕರು ‘ಅಪ್ಪು’ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ಡಾ. ರಾಜ​​ಕುಮಾರ್​ ಕುಟುಂಬದವರು ಸಹ ಸಮಾಧಿಗೆ ಭೇಟಿ ನೀಡಿದ್ದಾರೆ. ಪುನೀತ್ ರಾಜ್‌ಕುಮಾರ್ 50ನೇ ಹುಟ್ಟುಹಬ್ಬದ ಅಂಗವಾಗಿ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ಪೂಜೆಯನ್ನು ಸಲ್ಲಿಸಲಾಗಿದೆ. ಅಪ್ಪುಗೆ ಇಷ್ಟವಾದ ತಿನಿಸುಗಳನ್ನು ಇಟ್ಟು ಪೂಜೆ ಮಾಡಲಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್, ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್ ಹಾಗೂ ಅಪ್ಪು ಮಕ್ಕಳು ಭಾಗಿಯಾದರು.

Related Posts

error: Content is protected !!